ನವದೆಹಲಿ: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಅವಧಿ ಅಂತ್ಯದ ಬೆನ್ನಲ್ಲೇ ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗಷ್ಟೆ ನಡೆದಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಮುಖ್ತಾರ್ ಅಬ್ಬಾಸ್ ಸ್ಪರ್ಧಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಸಭೆ ಅವಧಿ ಗುರುವಾರ ಅಂತ್ಯಗೊಳ್ಳಲಿದೆ. ಮೋದಿ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಖ್ವಿಗೆ ಕೇಂದ್ರ ಸರ್ಕಾರ ರಾಜ್ಯಪಾಲ ಹುದ್ದೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
PublicNext
06/07/2022 05:31 pm