ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮ ಸರಕಾರ ಭ್ರಷ್ಟಾಚಾರವನ್ನು ಎಂದೆಂದೂ ಸಹಿಸೋದಿಲ್ಲ: ಸಚಿವ ಸುಧಾಕರ್

ಬೆಂಗಳೂರುವ: ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದಕ್ಕೆ ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ನಡೆಯುತ್ತಿರುವ ಕಠಿಣ ಮತ್ತು ನಿಷ್ಪಕ್ಷಪಾತ ತನಿಖೆಯೇ ನಿದರ್ಶನ ಎಂದು ಅರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದಕ್ಕೆ ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ನಡೆಯುತ್ತಿರುವ ಕಠಿಣ ಮತ್ತು ನಿಷ್ಪಕ್ಷಪಾತ ತನಿಖೆಯೇ ನಿದರ್ಶನ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ಸೇರಿದಂತೆ 50 ಪೊಲೀಸ್ ಸಿಬ್ಬಂದಿಗಳನ್ನು ಬಂಧಿಸಿರುವ ದಿಟ್ಟ ಕ್ರಮಕ್ಕೆ ತನಿಖಾ ತಂಡ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ನಿರ್ದಾಕ್ಷಿಣ್ಯ ತನಿಖೆಗೆ ಆದೇಶಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿರುವ ಭ್ರಷ್ಟಾಚಾರವನ್ನು ಬೇರು ಸಮೇತ ನಿರ್ಮೂಲನೆ ಮಾಡುವ ಅಚಲ ರಾಜಕೀಯ ಇಚ್ಚಾಶಕ್ತಿ ಮತ್ತು ಬದ್ಧತೆ ತೋರುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಭಾಗವಾಗಿರಲು ಹೆಮ್ಮೆ ಎನಿಸುತ್ತದೆ ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

06/07/2022 05:44 pm

Cinque Terre

59.66 K

Cinque Terre

12

ಸಂಬಂಧಿತ ಸುದ್ದಿ