ನವದೆಹಲಿ: ಕೇಂದ್ರದ ಇಬ್ಬರು ಸಚಿವರು ರಾಜೀನಾಮೆ ನೀಡಿದ ಬಳಿಕ ಸಚಿವೆ ಸ್ಮೃತಿ ಇರಾನಿ ಹಾಗೂ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಈಗ ಹೆಚ್ಚುವರಿ ಖಾತೆ ನೀಡಲಾಗಿದೆ.
ಹೌದು.ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿಯೇ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೃತಿ ಇರಾನಿ ಅವರಿಗೆ ಈಗ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನೂ ನೀಡಲಾಗಿದೆ.
ಕೇಂದ್ರ ಸಚಿವ ಆರ್.ಪಿ.ಸಿಂಗ್ ಕೂಡ ರಾಜೀನಾಮೆ ನೀಡಿದ್ದು, ನಾಗರಿಕ ಮತ್ತು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಈಗ ಉಕ್ಕಿನ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನೂ ಕೊಡಲಾಗಿದೆ.
PublicNext
06/07/2022 10:37 pm