ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಹಮ್ಮಿಕೊಂಡಿದ್ದಾರೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಭಯ ಇಲ್ಲ. ನಾವೂ ಸಹಕಾರ ಕೊಡುತ್ತೇವೆ. ಬೇಕಾದರೇ ಇನ್ನೂ 4-5 ಲಕ್ಷ ಜನರನ್ನು ನಾವೇ ಕಳುಹಿಸುತ್ತೇವೆ. ಆದರೆ ಸಿದ್ದರಾಮೋತ್ಸವದಿಂದ ಭಯ ಆಗ್ತಿರೋದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮೋತ್ಸವ ಕಾರ್ಯಕ್ರಮದ ತಯಾರಿಗಳು ಶುರು ಆದಾಗಿನಿಂದ ಡಿ.ಕೆ.ಶಿವಕುಮಾರ್ ನಿದ್ದೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಅವರ ನಿದ್ದೆ ಕೆಡಿಸುತ್ತಿದ್ದಾರೆ. ಮುಂದಿನ ಸಿಎಂ ಎಂದು ಶಕ್ತಿಪ್ರದರ್ಶನ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಸಿದ್ದರಾಮಯ್ಯ ತನ್ನ ಜೊತೆಗೆ ಇದ್ದವರನ್ನೆಲ್ಲ ಮುಗಿಸಿದ್ದಾರೆ. ಇದೀಗ ಡಿಕೆಶಿ ಅವರನ್ನು ಮುಗಿಸಲು ತಂತ್ರವನ್ನು ಹೆಣೆದಿದ್ದಾರೆ ಎಂದರು.
PublicNext
07/07/2022 03:34 pm