ದಾವಣಗೆರೆ: ದಾವಣಗೆರೆಯಲ್ಲಿ ಆಗಸ್ಟ್ 3ರಂದು ಏರ್ಪಡಿಸಿರುವುದು ಸಿದ್ದರಾಮೋತ್ಸವ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನುಮ ದಿನದ ಅಮೃತ ಮಹೋತ್ಸವ. ನಾವು ಯಾರೂ ಸಿದ್ದರಾಮೋತ್ಸವವೆಂದು ಎಲ್ಲಿಯೂ ಹೇಳಿಲ್ಲ ಎಂದು ಸಿದ್ದರಾಮಯ್ಯ 75ನೇ ವರ್ಷದ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್. ರಾಜಣ್ಣ ಹೇಳಿದರು.
ನಗರದ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಥ ಐತಿಹಾಸಿಕ ಸಮಾರಂಭದ ಬಗ್ಗೆ ಏನೇನ್ನೆಲ್ಲಾ ಬರುತ್ತಿದೆ. ಇದು ಸತ್ಯಕ್ಕೆ ದೂರವಾದದ್ದು. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಗಿದ್ದು, ಅಮೃತ ಮಹೋತ್ಸವದ ಸಮಯ. ಸಿದ್ದರಾಮಯ್ಯನವರು ಈ ನಾಡು ಕಂಡ ಶ್ರೇಷ್ಠ ರಾಜಕಾರಣಿ. ಇಲ್ಲಸಲ್ಲದ ವದಂತಿ ಹಬ್ಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದು ಪಕ್ಷದ ವತಿಯಿಂದ ಏರ್ಪಡಿಸಿರುವ ಕಾರ್ಯಕ್ರಮ ಅಲ್ವೇ ಅಲ್ಲ. ಆಗಸ್ಟ್ 3 ರಂದು ದಾವಣಗೆರೆ - ಹರಿಹರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶಾಮನೂರು ಶಿವಶಂಕರಪ್ಪರ ಒಡೆತನದ ಸುಮಾರು 50 ಎಕರೆ ಜಾಗವಾದ ಶಾಮನೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಮಾರು 6ರಿಂದ 7 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
PublicNext
09/07/2022 10:26 pm