ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಎಸ್.ಸಿ - ಎಸ್.ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಹಾವೇರಿ: ಎಸ್.ಸಿ ಎಸ್.ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊಸಮನಿ ಸಿದ್ದಪ್ಪ ಸರ್ಕಲ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಪರಿಶಿಷ್ಟ ಜಾತಿ ಪಂಗಡದ ಮುಖಂಡರು ಜಿಲ್ಲಾಧಿಕಾರಿಗಳು ಬಂದು ಮನವಿ ಸ್ವೀಕರಿಸುವ ವರೆಗೆ ನಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ಹೊರಹಾಕಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೂಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ರುದ್ರಪ್ಪ ಲಮಾಣಿ, ಜಿಲ್ಲಾ ಅದ್ಯಕ್ಷ ರಮೇಶ ಆನ್ವಟ್ಟಿ, ಮಾಜಿ ಶಾಸಕ ಮನೋಹರ ತಹಶೀಲ್ದಾರ. ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

Edited By : Manjunath H D
PublicNext

PublicNext

11/07/2022 06:52 pm

Cinque Terre

43.82 K

Cinque Terre

1

ಸಂಬಂಧಿತ ಸುದ್ದಿ