ಬೆಂಗಳೂರು: 'ನನಗೆ ಯಾವ ಉತ್ಸವವೂ ಬೇಡ. ನನಗೆ ಕಾಂಗ್ರೆಸ್ ಹಾಗೂ ದೇಶದ ಉತ್ಸವ ಬೇಕು. ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು. ಅದೇ ನನ್ನ ಗುರಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು
'ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ ಹುಟ್ಟುಹಬ್ಬದ ಸಮಯದಲ್ಲಿ ಅಭಿಮಾನಿಗಳು ಜಾಹೀರಾತು ನೀಡುತ್ತೇವೆ ಎಂದಾಗಲೂ ಬೇಡ ಎಂದಿದ್ದೆ.
ನನ್ನ ಕುಟುಂಬದ ಸಮೇತ ಕೇದಾರನಾಥಕ್ಕೆ ಹೋಗಿ ಅಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಬಂದೆ. ಬೇರೆಯವರ ಹೇಳಿಕೆ ಅಭಿಮಾನದ ವಿಚಾರ ಅಷ್ಟೆ.
ನಾನು ಅಧ್ಯಕ್ಷನಾಗಿ ಅಧಿಕಾರ ತೆಗೆದುಕೊಂಡ ದಿನವೇ, ಯಾರೂ ಕೂಡ ನನ್ನ ಪೂಜೆ ಮಾಡಬೇಡಿ, ಪಕ್ಷ ಪೂಜೆ ಮಾಡಿ ಎಂದು ಹೇಳಿದ್ದೆ. ಈಗಲೂ ಅದಕ್ಕೆ ಬದ್ಧನಾಗಿದ್ದೇನೆ. ಅಭಿಮಾನಿಗಳು ಅವರ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ.
ಅದಕ್ಕೂ ನನಗೂ ಸಂಬಂಧವಿಲ್ಲ.' ಎಂದು ಹೇಳಿದರು.
--ಪ್ರವೀಣ್ ರಾವ್..
PublicNext
13/07/2022 07:21 pm