ಬೆಂಗಳೂರು: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬುಧವಾರ ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಬಿಎಸ್ ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, 'ಭೇಟಿಯಲ್ಲಿ ಕುತೂಹಲ ಏನಿಲ್ಲ. ಬೆಂಗಳೂರಿಗೆ ಬಂದಾಗ ಭೇಟಿಯಾಗುತ್ತೇನೆ. ಅವರು ಹಿರಿಯರು, ನಮ್ಮ ಸಮಾಜದ ಮುಖಂಡರು. ಇವತ್ತು ಗುರುಪೂರ್ಣಿಮೆ ಬೇರೆ. ಹಿರಿಯರ ಆಶೀರ್ವಾದ ಪಡೆಯೋಣ ಎಂದು ಬಂದೆ. ಬೇರೆ ರೀತಿ ಏನೂ ಇಲ್ಲ. ಇದೊಂದು ಸೌಹಾರ್ಧಯುತ ಭೇಟಿ. ಅವರ ಮಾರ್ಗದರ್ಶನ ಪಡೆದಿದ್ದೇನೆ. ಅವರ ಜೊತೆ ರಾಜಕಾರಣದ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.
ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ಕೊಡಬೇಕು ಎಂಬ ಆಸಕ್ತಿ ಬಿಎಸ್ ಯಡಿಯೂರಪ್ಪ ಅವರಿಗೆ ಇತ್ತು. ಕಾರಣಾಂತರಗಳಿಂದ ಕೊಡಲು ಆಗಲಿಲ್ಲ. ಎಲ್ಲಾ ಅಡೆತಡೆ ನಿವಾರಣೆ ಮಾಡಿ, ಬೇರೆ ಸಮುದಾಯಕ್ಕೆ ತೊಂದರೆಯಾಗದಂತೆ 2-ಎ ಮೀಸಲಾತಿಯನ್ನ ನೀಡಬೇಕಿದೆ. ಬೊಮ್ಮಾಯಿ ಸಾಹೇಬ್ರು ಮೇಲೆ ಭರವಸೆ ಇದೆ ಎಂದರು.
PublicNext
13/07/2022 10:43 pm