ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 16ರಂದು ಶಿಗ್ಗಾಂವ್, ಸವಣೂರು ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ತಲುಪಿ ರಸ್ತೆ ಮೂಲಕ ಶಿಗ್ಗಾಂವ್ ತಾಲೂಕಿನ ಖುರ್ಷಾಪುರ ಗ್ರಾಮಕ್ಕೆ ಮಧ್ಯಾಹ್ನ 1.30ಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ನಂತರ ಸಂಜೆ 4.30ಕ್ಕೆ ಶಿಗ್ಗಾಂವ್ ಪಟ್ಟಣಕ್ಕೆ ಭೇಟಿ ನೀಡಿ, ಸಮಗ್ರ ಕೃಷಿ ಪದ್ಧತಿಗಳ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ, ಪಶು ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಈಗಾಗಲೇ ಸಿಎಂ ಪ್ರವಾಸ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆ ನಡೆದಿದೆ. ಈ ಸಂದರ್ಭ ಸಿಎಂ ಜತೆಗೆ ಜಿಲ್ಲಾ ಹಾಗೂ ತಾಲೂಕು ವಲಯ ಮಟ್ಟದ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
PublicNext
15/07/2022 03:44 pm