ವರದಿ-ಸಂತೋಷ ಬಡಕಂಬಿ.
ಅಥಣಿ: ಚುನಾವಣೆ ಸಂದರ್ಭದಲ್ಲಿ ನಡೆದ ರಾಜಕೀಯ ಕುತಂತ್ರವೇ ನನ್ನ ಸೋಲಿಗೆ ಕಾರಣ ಎಂದು ವಿಧಾನ ಪರಿಷತ್ ಚುನಾವಣೆ ವಾಯುವ್ಯ ಮತಕ್ಷೇತ್ರದ ಶಿಕ್ಷಕರ ಅಭ್ಯರ್ಥಿಯಾಗಿದ್ದ ಅರುಣ್ ಶಹಾಪುರ ಅವರು ಆರೋಪಿಸಿದರು.
ಅವರು ಇಂದು ಅಥಣಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಚುನಾವಣೆಯಲ್ಲಿ ಸೋಲು ಗೆಲುವು ಸಹಜ, ಈ ಚುನಾವಣೆ ವಿಷಯಾಧಾರಿತ ಚುನಾವಣೆ ಆಗದೆ ಇರೋದೇಕ್ಕೆ ನನಗೆ ಸೋಲಾಯಿತು ಎಂದರು.
ಮುಂದುವರೆದು ಮಾತನಾಡುತ್ತಾ ನಾನು ಶಿಕ್ಷಕರ ಪರವಾಗಿ 12 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದೇನೆ. ಮುಂದೆ ನಾನು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ನನ್ನನ್ನು ನಾನು ತೊಡಗಿಸಿಕೊಳ್ಳುವೆ ಹಾಗೂ ಪ್ರಕಾಶ್ ಹುಕ್ಕೇರಿ ಅವರು ಶಿಕ್ಷಕರ ಪರ ಕೆಲಸ ಮಾಡಿದ್ರೆ ನಾನು ಅವರಿಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಅಚ್ಚರಿಯ ಹೇಳಿಕೆ ನೀಡಿದರು.
ಈ ವೇಳೆ ಮಹಾವಿದ್ಯಾಲಯದ ಹಲವು ಉಪನ್ಯಾಸಕರು ಹಾಗೂ ಇತರರು ಉಪಸ್ಥಿತರಿದ್ದರು.
PublicNext
17/07/2022 10:14 am