ನವದೆಹಲಿ: ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಖರ್ ಇಂದು ನಾಮಪತ್ರ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿಯೇ ಜಗದೀಪ್ ನಾಮಪತ್ರ ಸಲ್ಲಿಸಿದ್ದಾರೆ.
ನಾಮ ಪತ್ರ ಸಲ್ಲಿಸಿದ ಬಳಿಕ ಜಗದೀಪ್ ಧಂಖರ್ ಮಾಧ್ಯಮಕ್ಕೂ ಮಾತನಾಡಿದ್ದಾರೆ. ನಾನು ಒಬ್ಬ ಸಾಮಾನ್ಯ ಮನುಷ್ಯ. ಕನಸ್ಸಿನಲ್ಲೂ ಈ ಒಂದು ಅವಕಾಶ ಸಿಗುತ್ತದೆ ಎಂದು ಭಾವಿಸಿರಲಿಲ್ಲ.
ಆದರೆ, ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ಅವರಿಗೆ ಧನ್ಯವಾದಗಳು ಅಂತಲೇ ಜಗದೀಪ್ ಹೇಳಿದ್ದಾರೆ.
PublicNext
18/07/2022 02:08 pm