ಗದಗ: ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದಿಂದ ಜಿಲ್ಲೆಯಾದ್ಯಂತ ಅಕಾಲಿಕ ಮಳೆಗೆ ಬೆಳೆ ಹಾನಿ ಮತ್ತು ಬಿದ್ದ ಮನೆಗೆ ಪರಿಹಾರ ಸೇರಿದಂತೆ ಜಿಲ್ಲೆಯ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಗದಗ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಕಾರ್ಯದರ್ಶಿಗಳಾದ ಹನುಮಂತಪ್ಪ ಅಬ್ಬಿಗೇರಿ ಜಿಲ್ಲಾ ಅಧ್ಯಕ್ಷ ಶರಣು ಎಸ್ ಗೋಡಿ ಮತ್ತು ಯುವ ಘಟಕದ ಅಧ್ಯಕ್ಷ ನಿಂಗನಗೌಡ ಮಾಲಿ ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ನಂತರ ಮಾತನಾಡಿದ ಶರಣು ಗೋಡಿ ಅಕಾಲಿಕ ಮಳೆಗೆ ಬಡ ಕುಟುಂಬಗಳ ಮನೆಗಳು ಬಿದ್ದಿವೆ ಹಾಗೂ ರೈತರು ಬೆಳೆದ ಬೆಳೆಗಳು ಹಾಳಾಗಿವೇ, ಇನ್ನು ಗದಗ ಜಿಲ್ಲಾದಂತ್ಯ ರಸ್ತೆಗಳು ಸಂಪೂರ್ಣ ಹಾಳಾಗಿವೆ ಮತ್ತು ಗೊಬ್ಬರ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರಕ್ಕೆ ಲಿಂಕ ತೆಗೆದುಕೊಳ್ಳುತ್ತಿದ್ದಾರೆ ಕೂಡಲೇ ಸರಿಪಡಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು ವಿವಿಧ ಘಟಕಗಳ ಅಧ್ಯಕ್ಷರು ಸದಸ್ಯರು ಭಾಗವಹಿಸಿದ್ದರು.
PublicNext
18/07/2022 05:13 pm