ದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಸಿದರು. ಹೌದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ನಾಯಕರ ನೇತೃತ್ವದಲ್ಲಿ ಧನಕರ್ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ನೂತನ ಉಪರಾಷ್ಟ್ರಪತಿ ಆಯ್ಕೆಗೆ ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ. ಎನ್ ಡಿಎ ಪರವಾಗಿ ಜಗದೀಪ್ ಧನಕರ್ ಮತ್ತು ವಿಪಕ್ಷಗಳ ಕಡೆಯಿಂದ ಕನ್ನಡತಿ ಮಾರ್ಗರೇಟ್ ಆಳ್ವಾ ಅವರು ಅಭ್ಯರ್ಥಿಯಾಗಿದ್ದಾರೆ. ಇವರು ಗೋವಾದ ಮಾಜಿ ರಾಜ್ಯಪಾಲರಾಗಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳು ಜುಲೈ 19ರ ವರೆಗೆ ನಾಮಪತ್ರ ಸಲ್ಲಿಸಬಹುದು.
ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ 22ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಮತ್ತು ಆಗಸ್ಟ್ 6 ರಂದು ಮತದಾನ ನಡೆಯಲಿದೆ. ಅಂದು ಸಂಜೆಯೇ ಫಲಿತಾಂಶ ಬರಲಿದೆ.
PublicNext
18/07/2022 10:01 pm