ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಮಾಡಿ ಸಂಸದೆ, ಪ್ರಾಣಿಗಳ ಹಕ್ಕು ಹೋರಾಟಗಾರ್ತಿ ಮನೇಕಾ ಗಾಂಧಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವುದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಆನೆಯನ್ನು ಕೊಂದು ದಂತ ಮಾರಾಟ ಮಾಡುವಾಗ ಸಿಕ್ಕಿಬಿದ್ದ ಆರೋಪಿಯನ್ನು ರಕ್ಷಿಸಲು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ತಕ್ಷಣ ಮಧ್ಯಪ್ರವೇಶ ಮಾಡಿ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಡೆಸಲು ಒತ್ತಾಯಿಸಿದ್ಧಾರೆ.
ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿರುವ ಮನೇಕಾ ಗಾಂಧಿ, ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಬಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ಧಾರೆ.
PublicNext
19/07/2022 03:17 pm