ರಾಮನಗರ: 2023ರ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಫೈಟ್ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.
ಇದೇ ವಿಚಾರವಾಗಿ ರಾಮನಗರದಲ್ಲಿ ಮಾತನಾಡಿರುವ ಡಿಕೆ ಶಿವಕುಮಾರ್ ಅವರು, "ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಅವಕಾಶ ಮಾಡಿಕೊಡಿ" ಎಂದು ರಾಮನಗರ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೇನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು. ನಿಮ್ಮ ಜಿಲ್ಲೆಯ ಮಗನಿಗೆ ಕೊಡಬೇಕೆಂಬ ಆಸೆಯಿದ್ದರೆ ಮಾಡಬೇಕು. ದೇಶದಲ್ಲಿ ಈಗ ಪ್ರತಿಯೊಂದು ವಸ್ತುವಿನ ಬೆಲೆ ಗಗನಕ್ಕೆ ಏರಿದೆ. ಪ್ರತಿಯೊಬ್ಬರ ಬದುಕಿನಲ್ಲಿ ಸರ್ಕಾರ ಕತ್ತರಿ ಹಾಕುತ್ತಿದೆ. ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
PublicNext
20/07/2022 03:54 pm