ನವದೆಹಲಿ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸಚಿವ ಜಿತಿನ್ ಪ್ರಸಾದ್ ಅವರು ವರಿಷ್ಟರಿಗೆ ದೂರು ಸಲ್ಲಿಸಿದ್ದಾರೆ.
ನಾನು ದಲಿತ ಎಂಬ ಕಾರಣಕ್ಕೆ ನನ್ನನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಅಸಮಾಧಾನಗೊಂಡಿರುವ ಜಿತಿನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಿದ್ದಾರೆ. ಈ ಮೂಲಕ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಲ್ಲಿ ಭಿನ್ನಮತ ಕಾಣಿಸಿಕೊಂಡಿದೆ.
ತಮ್ಮ ಇಲಾಖೆಯ ಅಧಿಕಾರಿಯೊಬ್ಬರನ್ನು ಸಿಎಂ ಅಮಾನತು ಮಾಡಿದ್ದಾರೆ. ಈ ಕಾರಣಕ್ಕೆ ಸಿಎಂ ಮೇಲೆ ಜಿತಿನ್ ಸಿಟ್ಟಾಗಿದ್ದಾರೆ. ಸಚಿವ ಜಿತಿನ್ ಅವರಿಗೆ ಲೋಕೋಪಯೋಗಿ ಇಲಾಖೆ ವಹಿಸಲಾಗಿದೆ. ಅವರ ಇಲಾಖೆ ಮೇಲೆ ಈಗ ನಿರಂತರ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿವೆ. ಈ ಎಲ್ಲ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಕಚೇರಿಯು ತನಿಖೆಗೆ ಆದೇಶ ನೀಡಿದೆ ಎಂದು ವರದಿಯಾಗಿದೆ. ಇದೇ ಕಾರಣಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸಚಿವ ಜಿತಿನ್ ಪ್ರಸಾದ್ ನಡುವೆ ಭಿನ್ನಮತ ಶುರುವಾಗಿದೆ ಎನ್ನಲಾಗಿದೆ.
PublicNext
20/07/2022 11:08 pm