ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವರ ಹೆಸರಿನಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಆರು ವರ್ಷಗಳ ಕಾಲ ರಾಜ್ಯಸಭೆಯ ಸದಸ್ಯರಾಗಿ ಸೇವೆಗೆ ಅವಕಾಶವಿದೆ. ಈ ಬಾರಿಯ ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಖ್ಯಾತ ಅಥ್ಲೀಟ್ ಪಿ.ಟಿ. ಉಷಾ, ಸಿನಿಮಾ ಕತೆಗಾರ ವಿ. ವಿಜಯೇಂದ್ರ ಪ್ರಸಾದದರನ್ನ ನಾಮ ನಿರ್ದೇಶನ ಮಾಡಲಾಗಿತ್ತು.

"ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆಯನ್ನು ಹೊಂದಿ, ನನ್ನ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆ" ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ದೇವರ ಹೆಸರಿನಲ್ಲಿ ಅವರು ಪ್ರಮಾಣ ಸ್ವೀಕರಿಸಿದರು.

Edited By : Vijay Kumar
PublicNext

PublicNext

21/07/2022 01:14 pm

Cinque Terre

28.72 K

Cinque Terre

1

ಸಂಬಂಧಿತ ಸುದ್ದಿ