ವರದಿ: ರವಿ ಕುಮಾರ್, ಕೋಲಾರ
ಕೋಲಾರ: ಕೋಲಾರದಲ್ಲಿ ನಡೆದ ಬಿಜೆಪಿ ಪೂರ್ವಭಾವಿ ಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಸಚಿವ ವರ್ತೂರು ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.
ಕೋಲಾರದಲ್ಲಿ ಸ್ಪರ್ಧಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ರಮೇಶ್ ಕುಮಾರ್ ಒತ್ತಡ ಏರುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ವರ್ತೂರು ಪ್ರಕಾಶ್, ಸಿದ್ದರಾಮಯ್ಯನವರ ವಿರುದ್ಧ ಏಕವಚನದಲ್ಲಿಯೇ ಹರಿಹಾಯ್ದರು.
"ಸಿದ್ದರಾಮಯ್ಯ, ನಿನ್ನನ್ನು ಮುಗಿಸಲು ಕೋಲಾರ ಜಿಲ್ಲೆಗೆ ರಮೇಶ್ ಕುಮಾರ್ ಕರೆಯುತ್ತಿದ್ದಾರೆ. ನಿನ್ನನ್ನು ಎದುರಿಸಲು ನಾನು ಸಿದ್ಧನಾಗಿದ್ದೇನೆ, ಹುಷಾರ್" ಎಂದು ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ.
PublicNext
21/07/2022 08:28 pm