ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಟ್ಟಿದ್ದೇವೆ: ಮಾಜಿ ಸ್ಪೀಕರ್ ರಮೇಶ್‌ಕುಮಾರ್

ಬೆಂಗಳೂರು: ”ಗಾಂಧಿ ಕುಟುಂಬದ ಹೆಸರಲ್ಲಿ 3-4 ತಲೆಮಾರುಗಳಿಗೆ ಆಗುವಷ್ಟು ಹಣ, ಆಸ್ತಿ ಮಾಡಿಕೊಂಡಿದ್ದೇವೆ. ಹೀಗಾಗಿ ಈಗ ನಾವು ಈಗ ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ” ಎಂದು ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಘಂಟಾಘೋಷವಾಗಿ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಈ ಮಾತು ಹೇಳಿದ್ದಾರೆ.

“ಕಾಂಗ್ರೆಸ್‌ ಸುಮಾರು 70 ವರ್ಷ ದೇಶ ಆಳಿದೆ. ಕಾಂಗ್ರೆಸ್‌ನವರೇ ಆದ ನಾವೆಲ್ಲರೂ ಮುಂದಿನ ಮೂರ್ನಾಲ್ಕು ತಲೆಮಾರುಗಳಿಗೆ ಆಗುವಷ್ಟು ಆಸ್ತಿ, ಹಣ ಗಳಿಸಿದ್ದೇವೆ. ಅಧಿಕಾರ ಅನುಭವಿಸಿದ್ದೇವೆ. ಇದೀಗ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಆರೋಪ ಮೇಲೆ ವಿಚಾರಣೆ ನಡೆಯುತ್ತಿದೆ. ದೇಶ ಉಳಿಯಲು, ಕಾಂಗ್ರೆಸ್‌ ಉಳಿಸಲು ನಾವೆಲ್ಲರೂ ಒಟ್ಟಾಗಿ ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು.

“ಗಾಂಧಿ ಕುಟುಂಬದ ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ. ಪಕ್ಷ ಕುಟುಂಬ ಇದ್ದಂತೆ, ಕುಟುಂಬ ಎಂದ ಮೇಲೆ ಸಣ್ಣ ಪುಟ್ಟ ಮನಸ್ತಾಪಗಳೆಲ್ಲವು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ ನಾವೆಲ್ಲರು ಒಂದಾಗಬೇಕು. ಸಂಕಷ್ಟದಲ್ಲಿರುವ ಸೋನಿಯಾ ಅವರೊಂದಿಗೆ ನಿಲ್ಲಬೇಕು. ಆಗ ಮಾತ್ರ ನಾವು ತಿನ್ನುವ ಎರಡು ಹೊತ್ತಿನ ಊಟಕ್ಕೆ ಸಾರ್ಥಕ ಬರುತ್ತದೆ” ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿದರು.

Edited By : Nagaraj Tulugeri
PublicNext

PublicNext

21/07/2022 09:03 pm

Cinque Terre

49.49 K

Cinque Terre

45

ಸಂಬಂಧಿತ ಸುದ್ದಿ