ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋನಿಯಾ ಅಳಿಯ ರಾಬರ್ಟ್ ವಾದ್ರಾ ರಾಜಕೀಯ ಪ್ರವೇಶ?

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿರುವುದರ ವಿರುದ್ಧ ಕಿಡಿಕಾರಿರುವ ಸೋನಿಯಾ ಅವರ ಅಳಿಯ ರಾಬರ್ಟ್ ವಾದ್ರಾ, ಅಗತ್ಯ ಉಂಟಾದರೆ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ.

ಹೌದು ‘ಈ ದೇಶದಲ್ಲಿ ಬದಲಾವಣೆಯ ಅಗತ್ಯವಿಗೆ, ನನ್ನಿಂದ ಆ ಬದಲಾವಣೆ ಸಾಧ್ಯ ಎಂದು ಜನರಿಗೆ ಅನಿಸಿದರೆ,ಅಗತ್ಯ ಬಿದ್ದರೆ ನಾನು ಸಕ್ರಿಯ ರಾಜಕಾರಣಕ್ಕೆ ಬರುವೆ’ ಎಂದು ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ತಿಳಿಸಿದ್ದಾರೆ.‘ತನ್ನ ನೀತಿಗಳಿಂದ ದೇಶಕ್ಕೆ ಅಸಂತೋಷವಾಗಿದೆ ಎಂದು ಅನಿಸಿದಾಗಲೆಲ್ಲಾ ಬಿಜೆಪಿ ಗಾಂಧಿ ಕುಂಟುಂಬಕ್ಕೆ ನೀಡಲು ಆರಂಭಿಸುತ್ತದೆ’ ಎಂದು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಈ ಸಂಸ್ಥೆಗಳು ವಿಚಾರಣೆಗೆ ಕರೆಸಿಕೊಂಡ ಒಬ್ಬ ಬಿಜೆಪಿ ನಾಯಕನ ಹೆಸರನ್ನು ಹೇಳಲಿ ನೋಡೋಣ ಎಂದು ಟೀಕಿಸಿದ್ದಾರೆ.

ಜನರು ಜಿಎಸ್ ಟಿ ವಿಚಾರವಾಗಿ ಅಸಮಾಧಾನಗೊಂಡಿದ್ದಾರೆ ಎಂಬ ಕಾರಣಕ್ಕೆ ಇ.ಡಿ ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ನಾನು ಅವರಿಗೆ (ಸೋನಿಯಾ ಗಾಂಧಿ) ತನಿಖಾ ಸಂಸ್ಥೆಯನ್ನು ಹೇಗೆ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದೆ. ಏಕೆಂದರೆ ನಾನು 15 ಬಾರಿ ಇ.ಡಿಗೆ ಹೋಗಿದ್ದೆ ಮತ್ತು 23,000 ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

22/07/2022 08:21 am

Cinque Terre

77.87 K

Cinque Terre

30

ಸಂಬಂಧಿತ ಸುದ್ದಿ