ದಾವಣಗೆರೆ:ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಜಮೀರ್ ಅಹ್ಮದ್ ಮತ್ತೊಮ್ಮೆ ಪ್ರತಿಪಾದಿಸಿ ಡಿ.ಕೆ.ಶಿವಕುಮಾರ್ ಗೆ ಟಾಂಗ್ ಕೊಟ್ಟಿದ್ದಾರೆ.
ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಡಿ.ಕೆ.ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು. ಅವರು ಸಿಟ್ಟಾದ್ರೆ ನಾನೇನು ಮಾಡೋಕೆ ಆಗುತ್ತದೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಂತ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ.
ನನ್ನ ಅಭಿಪ್ರಾಯದಲ್ಲಿ ಯಾವುದೇ ತಪ್ಪಿಲ್ಲ. ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಆಗಬೇಕು ಅನ್ನೋದೇ ನನ್ನ ವೈಯುಕ್ತಿಕ ಅಭಿಪ್ರಾಯ ಅಂತಲೇ ಜಮೀರ್ ಮತ್ತೆ ಹೇಳಿಕೊಂಡಿದ್ದಾರೆ.
PublicNext
22/07/2022 08:20 pm