ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಬಿಎಸ್ ವೈ ಮತ್ತೊಮ್ಮೆ ಸ್ಪರ್ಧಿಸಬೇಕು: ಕಣ್ಣೀರು ಸುರಿಸುತ್ತಾ ಹೇಳಿದ ರೇಣುಕಾಚಾರ್ಯ...!

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇನ್ನೊಂದು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.‌ರೇಣುಕಾಚಾರ್ಯ ಇಂಗಿತ ವ್ಯಕ್ತಪಡಿಸಿದರು.

ಹೊನ್ನಾಳಿ ಪಟ್ಟಣದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಹೇಳಿಲ್ಲ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಬೇಕೆಂಬ ಸಂಕಲ್ಪ ಮಾಡಿದ್ದಾರೆ. ಅವರ ಅಪೇಕ್ಷೆ ಇದೆ. ಕಾಂಗ್ರೆಸ್ ಇನ್ನು 20 ವರ್ಷ ಪ್ರತಿಪಕ್ಷ ಸ್ಥಾನದಲ್ಲಿ ಕೂರಲಿದೆ. ಮತ್ತೊಮ್ಮೆ 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಕ್ಷಾಂತರ ಯುವಕರಿಗೆ ಯಡಿಯೂರಪ್ಪ ಮಾರ್ಗದರ್ಶನ ಅವಶ್ಯಕ. ರಾಜ್ಯದ ಉದ್ದಗಲಕ್ಕೂ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ಪರಿಶಿಷ್ಟ ಜಾತಿ, ವರ್ಗ ಸೇರಿದಂತೆ ಎಲ್ಲಾ ವರ್ಗದವರು ಬಿಜೆಪಿ ಹಾಗೂ ಯಡಿಯೂರಪ್ಪ ಅವರಿಗೆ ಬೆಂಬಲ ನೀಡಿದ್ದಾರೆ. ಬಿಎಸ್ ವೈ ಮಾಸ್ ಲೀಡರ್. ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂದಿದ್ದಾರೆ‌. ವಿಜಯೇಂದ್ರ ಸ್ಪರ್ಧೆ ಬಗ್ಗೆ ರಾಷ್ಟ್ರೀಯ ನಾಯಕರು, ವರಿಷ್ಠರು ನಿರ್ಧಾರ ಮಾಡಲಿದ್ದಾರೆ. ನಮ್ಮ ಅಪೇಕ್ಷೆ ಯಡಿಯೂರಪ್ಪ ಮತ್ತೆ ಸ್ಪರ್ಧೆ ಮಾಡಬೇಕೆಂಬುದು ಎಂದು ತಿಳಿಸಿದರು.

ಯಡಿಯೂರಪ್ಪ ಎದ್ದು ನಿಂತು ಮಾತನಾಡಲು ಶುರು ಮಾಡಿದ್ರೆ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಪ್ರತಿಪಕ್ಷದ ನಾಯಕರು ಆಲಿಸುತ್ತಾರೆ. ನಾವು ಯಾವಾಗ ಕರೆದರೂ ಯಡಿಯೂರಪ್ಪ ಬರುತ್ತಾರೆ‌. ಹೋರಾಟಕ್ಕೆ ಸ್ಫೂರ್ತಿ ತುಂಬಿದವರು ಯಡಿಯೂರಪ್ಪ ಅವರು. ಈಶ್ವರಪ್ಪ, ಅನಂತಕುಮಾರ್, ಡಿ.ಹೆಚ್. ಶಂಕರಮೂರ್ತಿ ಸೇರಿದಂತೆ ಹಲವರು ಪಕ್ಷ ಕಟ್ಟಿದ್ದಾರೆ‌. ಅವರು ನೀಡಿರುವ ಕೊಡುಗೆ ಅಪಾರ. ಯಡಿಯೂರಪ್ಪ ಅವರ ಜೊತೆ ನಾವೆಲ್ಲರೂ ಇರುತ್ತೇವೆ. ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಅನ್ನೋದು ಯಡಿಯೂರಪ್ಪರ ಮಾತು. ಅವರೊಬ್ಬ ಜಾತ್ಯಾತೀತ ವ್ಯಕ್ತಿ ಎಂದು ಹೇಳಿದರು. ಯಡಿಯೂರಪ್ಪನವರ ಹೆಸರು ಹೇಳುತ್ತಿದ್ದಂತೆ ಕಣ್ಣೀರು ಹಾಕಿದ ರೇಣುಕಾಚಾರ್ಯ ಅವರು ಮಾತಿನುದ್ದಕ್ಕೂ ಭಾವುಕರಾಗಿ ಪ್ರತಿಕ್ರಿಯೆ ನೀಡಿದರು.

Edited By : Nagesh Gaonkar
PublicNext

PublicNext

23/07/2022 01:51 pm

Cinque Terre

57.83 K

Cinque Terre

1

ಸಂಬಂಧಿತ ಸುದ್ದಿ