ದೆಹಲಿ : ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣವಚನ ಸ್ವೀಕರಿಸಿದರು. ಸಂಸತ್ತಿನ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ಲೋಕಸಭೆ ಸ್ವೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಇನ್ನು ಭಾರತದ ಅತಿಕಿರಿಯ ರಾಷ್ಟ್ರಪತಿಯಾಗಿ, ಬುಡಕಟ್ಟು ಸಮುದಾಯದಿಂದ ರಾಷ್ಟ್ರಪತಿ ಹುದ್ದೆಗೇರಿದ ಮೊದಲ ವ್ಯಕ್ತಿ ಮುರ್ಮು.
1997 ರಲ್ಲಿ ರಾಯ್ ರಂಗಾಪುರ್ ನಗರದ ಪಂಚಾಯತ್ ಕೌನ್ಸಿಲರ್ ಆಗಿ ಮುರ್ಮು ಅವರ ರಾಜಕೀಯ ಜೀವನ ಆರಂಭವಾಗಿದ್ದು 2000ರಲ್ಲಿ ರಾಯ್ ರಂಗಾಪುರ್ ನಗರ ಪಂಚಾಯತ್ ಅಧ್ಯಕ್ಷೆ, 2000 ಒಡಿಶಾ ರಾಜ್ಯ ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಮಂತ್ರಿ, 2015 ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ, 2022ರಲ್ಲಿ ಭಾರತದ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
PublicNext
25/07/2022 10:21 am