ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬರುವ ಚುನಾವಣೆಯಲ್ಲಿ ಕಾಂಗ್ರೆಸ್ 3ನೇ ಸ್ಥಾನಕ್ಕೆ ಇಳಿಯಲಿದೆ: ಆರ್. ಅಶೋಕ್

ಬೆಂಗಳೂರು: ಸದ್ಯ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ ಮುಂಬರುವ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಇಳಿಯಲಿದೆ ಎಂದು ಸಚಿವ ಆರ್‌. ಅಶೋಕ್‌ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ”ಕರ್ನಾಟಕದ ಜನರು ಜಾತೀಯತೆ ರಾಜಕಾರಣವನ್ನ ಪ್ರೋತ್ಸಾಹಿಸುವುದಿಲ್ಲ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟವಿದೆ. ಪಂಜಾಬಿನಂತೆಯೇ ಇಲ್ಲಿಯೂ ನಡೆಯುತ್ತಿದೆ. ಇನ್ನು ಕಾಂಗ್ರೆಸ್‌ನ ನಾಯಕರು ಯಾವುದೇ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಈ ಎಲ್ಲ ಕಾರಣಗಳಿಂದಾಗಿ ಮುಂಬರುವ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆಯಲಿದ್ದಾರೆ” ಆರ್. ಅಶೋಕ್ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

25/07/2022 04:31 pm

Cinque Terre

25.89 K

Cinque Terre

2