ಬೆಂಗಳೂರು: ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗ ನಡೆಯುತ್ತದೆ. ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಈ ನಡುವೆ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆದಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ತಮ್ಮ ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಭ್ರಷ್ಟಾಚಾರದ ಚರ್ಚೆಯಿಂದ ವಾಪಸ್ ಹೋಗುವುದಿಲ್ಲ. ಈ ಚರ್ಚೆಯನ್ನು ಅಧ್ಯಕ್ಷರ ಜತೆ ಮಾಡಬೇಕೋ, ಮಾಜಿ ಮುಖ್ಯಮಂತ್ರಿಗಳ ಜತೆ ಮಾಡಬೇಕೋ ಎಂದು ತೀರ್ಮಾನ ಮಾಡುತ್ತೇನೆ ಎಂದರು. ಸರ್ಕಾರ ಈಶ್ವರಪ್ಪ ಅವರ ಪ್ರಕರಣ ಮುಚ್ಚಿ ಹಾಕಿದ್ದು, ಈ ವಿಚಾರವಾಗಿ ಯಡಿಯೂರಪ್ಪ, ಮುಖ್ಯಮಂತ್ರಿ, ಗೃಹಸಚಿವರು ಏನೆಲ್ಲಾ ಹೇಳಿಕೆ ನೀಡಿದ್ದಾರೆ ನೀವೇ ನೋಡಿ. ಬಿ ರಿಪೋರ್ಟ್ ಸಲ್ಲಿಕೆ ಈ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರವೇ ಪ್ರಾರಂಭದಿಂದ ಪ್ರಯತ್ನ ಪಟ್ಟಿದ್ದನ್ನು ಸಾಬೀತುಪಡಿಸಿದೆ ಎಂದು ಡಿಕೆಶಿ ಹೇಳಿದರು.
PublicNext
25/07/2022 04:58 pm