ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವಭೂಪೇಂದ್ರ ಯಾದವ್ ಅವರನ್ನು ಭೇಟಿಯಾದ ಕರ್ನಾಟಕ ನಿಯೋಗ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಿಯೋಗವು ಕೇಂದ್ರ ಪರಿಸರ,ಅರಣ್ಯ‌ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಹಾಗೂ ಉದ್ಯೋಗ ಖಾತೆಯ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ನವದೆಹಲಿಯ ಶ್ರಮ ಶಕ್ತಿ ಭವನದಲ್ಲಿ ಭೇಟಿ ಮಾಡಿತು.

ಈ ನಿಯೋಗದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಖಾತೆಯ ಸಚಿವರಾದ ಶೋಭಾ ಕರಂದ್ಲಾಜೆ, ಗೃಹ ಸಚಿವ ಅರಗ ಜ್ಞಾನೇಂದ್ರ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ರಾಜ್ಯ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷ ಹಾಗೂ ಸಂಸದ ನಳೀನ್‌ ಕುಮಾರ್ ಕಟೀಲ್, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಭಾರತೀಯ ಜನತಾ ಪಕ್ಷದ ರಾಷ್ಡ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರೂ ಆದ ಸಿ.ಟಿ.ರವಿ,ಸಂಸದ ಪ್ರತಾಪ್ ಸಿಂಹ, ಕೋಲಾರ ಸಂಸದ ಮುನಿಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್,ಸಾಗರ ಶಾಸಕ ಹರತಾಳು ಹಾಲಪ್ಪ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್ ಇದ್ದರು.

Edited By :
PublicNext

PublicNext

26/07/2022 09:16 am

Cinque Terre

23.64 K

Cinque Terre

0

ಸಂಬಂಧಿತ ಸುದ್ದಿ