ನವದೆಹಲಿ: ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಇಂದು ಪಾರ್ಲಿಮೆಂಟ್ ನಿಂದ ವಿಜಯ್ ಚೌಕ್ ವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ರಾಷ್ಟ್ರದಲ್ಲಿ ರಾಜಧಾನಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ನೂಕುನುಗ್ಗಲು ಉಂಟಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೂ ಮುನ್ನ ಮಾತನಾಡಿದ ಅವರು, ಭಾರತ ಪೊಲೀಸ್ ರಾಷ್ಟ್ರ. ಅದಕ್ಕೆ ಮೋದಿ ಒಬ್ಬ ರಾಜ ಎಂದು ವಾಗ್ದಾಳಿ ನಡೆಸಿದ್ದಾರೆ.
PublicNext
26/07/2022 03:38 pm