ಕೊರಟಗೆರೆ: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಡಬಲ್ ಇಂಜಿನ್ ಸರ್ಕಾರವಾಗಿದ್ದು, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು ಎರಡು ಇಂಜಿನ್ ಸೇರಿ ಉತ್ತಮ ಕೆಲಸ ಮಾಡುತ್ತಿವೆ. ಆದರೆ ಕಾಂಗ್ರೆಸ್ ಪಕ್ಷದ ಡಬಲ್ ಸ್ಟೇರಿಂಗ್ ಇದೆ. ಕೆಪಿಸಿಸಿ ಅಧ್ಯಕ್ಷರು ಒಂದುಕಡೆ, ವಿರೋಧ ಪಕ್ಷದ ನಾಯಕರು ಒಂದು ಕಡೆ ಸ್ಟೇರಿಂಗ್ ನಡೆಯುತ್ತಿತ್ತು. ಇದು ಎಷ್ಟು ಸರಿ.? ಅಭಿವೃದ್ಧಿ ಎಲ್ಲಿಂದ ಸಾಧ್ಯ ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಟೀಕಿಸಿದರು.
ಕೊರಟಗೆರೆ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದರು/, "ಸಭೆಯಲ್ಲಿ ದಾವಣಗೆರೆ ಪ್ರಭಾರಿ ನವೀನ್, ಶಿರಾ ಕ್ಷೇತ್ರದ ಶಾಸಕ ಡಾ. ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ಮಾಜಿ ಶಾಸಕ ಗಂಗಹನುಮಯ್ಯ, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಸ್. ಪವನ್ ಕುಮಾರ್, ಕಾರ್ಯದರ್ಶಿ ಬಿ.ಕೆ ಗುರುದತ್ ಇದ್ದರು.
ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್.
PublicNext
26/07/2022 07:37 pm