ನವದೆಹಲಿ: ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದಕ್ಕಾಗಿ ದೊಡ್ಡಬಳ್ಳಾಪುರದಲ್ಲಿ ಜುಲೈ 28ರ ನಾಳೆ ‘ಜನೋತ್ಸವ’ ಹಮ್ಮಿಕೊಳ್ಳಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 1 ವರ್ಷ ಮತ್ತು ಬಿಜೆಪಿ ಸರ್ಕಾರ 3 ವರ್ಷ ಪೂರೈಸಲಿದ್ದು, ಸಂಭ್ರಮಾಚರಣೆ ಸಂಬಂಧ 2 ಸಮಾರಂಭಗಳನ್ನು ಆಯೋಜಿಸಲಾಗಿದೆ. ಸರ್ಕಾರದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದರೆ, ಪಕ್ಷದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಹೆಸರಿನ ಬೃಹತ್ ಸಮಾವೇಶ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಜುಲೈ 28 ಕ್ಕೆ ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ಹಾಗೂ ಬಿಜೆಪಿಯ ಮೂರು ವರ್ಷಗಳ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ಜನೋತ್ಸವ ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು 2021ರ ಜುಲೈ 28ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ದೊಡ್ಡಮಟ್ಟದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.
PublicNext
27/07/2022 11:16 am