ದಾವಣಗೆರೆ: ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅವರು ಗೋಮಾಂಸ ತಿನ್ನುತ್ತೇನೆ ಎಂದಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಾಗಲೂ ಇದೇ ಮಾತು ಹೇಳಿದ್ದರು. ಮುಸ್ಲಿಂ ಸಮುದಾಯದ ಪರ ಇರುವ ಏಕೈಕ ನಾಯಕ ಅವರು ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದರು.
ನಗರದ ತಾಜ್ ಪ್ಯಾಲೇಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಅಲ್ಪಸಂಖ್ಯಾತರ ವಿಭಾಗದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧಿಸಿದೆ. ಆದರೆ ಗೋ ಮಾಂಸವನ್ನು ತಿನ್ನುತ್ತೇವೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದರು. ಟಿಪ್ಪು ಜಯಂತಿ ನಿಷೇಧಿಸುವ ಪ್ರಸ್ತಾಪ ಬಂದಾಗಲೂ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎಂದು ಹೇಳಿದರು.
ಸಿದ್ದರಾಮಯ್ಯರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದ್ದಾರೆ. ಗೋಹತ್ಯೆ ನಿಷೇಧ ಮಾಡಿದಾಗ ನಾನು ಮುಸ್ಲಿಂರ ಜೊತೆ ಕುಳಿತು ಗೋಮಾಂಸ ಸೇವಿಸುತ್ತೇನೆ. ಏನು ಮಾಡುತ್ತೀರಾ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದರು. ಇಂಥ ನಾಯಕರು ನಮಗೆ ಬೇಕು. ನೀವೆಲ್ಲರೂ ಸಿದ್ದರಾಮಯ್ಯ ಅವರನ್ನೇ ಬೆಂಬಲಿಸಬೇಕು ಎಂದು ಕರೆ ನೀಡಿದರು.
PublicNext
27/07/2022 11:18 am