ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಅಧೀರ್ ರಂಜನ್ ಚೌಧರಿ ಹೇಳಿಕೆಗೆ ಲೋಕಸಭೆ, ರಾಜ್ಯಸಭೆಯಲ್ಲಿ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಅಧೀರ್ ರಂಜನ್ ಚೌಧರಿ ಹೇಳಿಕೆಗೆ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದ್ದಾರೆ.
ಸಂಸತ್ ಆವರಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು. ಜೊತೆಗೆ ಮಾಫಿ ಮಾಂಗೋ, ಮಾಫಿ ಮಾಂಗೋ (ಕ್ಷಮೆ ಕೇಳಿ, ಕ್ಷಮೆ ಕೇಳಿ) ಎಂದು ಆಗ್ರಹಿಸಿದ್ದಾರೆ.
"ರಾಷ್ಟ್ರಪತಿಗೆ ಅವಮಾನ ಮಾಡಬಾರದು, ಸದನದ ಹೊರಗೆ ರಾಷ್ಟ್ರಪತಿ ಬಗ್ಗೆ ಹಗುರವಾಗಿ ಮಾತನಾಡಲಾಗಿದೆ" ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಆಡಳಿತ, ಪ್ರತಿಪಕ್ಷಗಳೆರಡರಿಂದಲೂ ಪರಸ್ಪರರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
PublicNext
28/07/2022 02:57 pm