ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ರಾಜೀನಾಮೆ

ಲಕ್ನೋ : ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರದೇವ್ ಸಿಂಗ್ ಬುಧವಾರ ರಾಜೀನಾಮೆ ನೀಡಿದ್ದಾರೆ.ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಸ್ವತಂತ್ರದೇವ್ ಅವರನ್ನು ಜುಲೈ 16, 2019 ರಂದು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿಗಿತ್ತು. ಅವರ ಮೂರು ವರ್ಷಗಳ ಅವಧಿಯು ಜುಲೈ 16, 2022 ರಂದು ಕೊನೆಗೊಂಡಿತ್ತು.ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ನೂತನ ಅಧ್ಯಕ್ಷರು ಆಯ್ಕೆಯಾಗುವವರೆಗೆ ಈ ಸ್ಥಾನದಲ್ಲಿ ಮುಂದುವರೆಯುವಂತೆ ಜೆ.ಪಿ. ನಡ್ಡಾ, ಸ್ವತಂತ್ರ ದೇವ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ.ಸ್ವತಂತ್ರ ದೇವ್ ಸಿಂಗ್ ಅವರ ರಾಜೀನಾಮೆಯಿಂದ ತೆರವಾಗಿರುವ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ನೇಮಕಾತಿ ಆಗಲಿದೆ.

Edited By : Nirmala Aralikatti
PublicNext

PublicNext

28/07/2022 04:42 pm

Cinque Terre

62.98 K

Cinque Terre

0

ಸಂಬಂಧಿತ ಸುದ್ದಿ