ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವೀಣ್ ನೆಟ್ಟಾರು ಹತ್ಯೆ-ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ!

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯನ್ನ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರವಾಗಿಯೇ ಖಂಡಿಸಿದ್ದಾರೆ. ಈ ಕೇಸ್ ಸಂಬಂಧಿಸಿದಂತೆ ಅಪರಾಧಿಗಳನ್ನ ಬಂಧಿಸಿ ಕಾನೂನು ಕ್ರಮ ಜರುಗಿಸಲು ಪೊಲೀಸರು ಪೂರ್ಣ ಸ್ವಾತಂತ್ರವನ್ನ ಕೂಡ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರೊ ಆರಗ ಜ್ಞಾನೇಂದ್ರ ಅವ್ರು, ಅಪರಾಧಿಗಳನ್ನ ಬಂಧಿಸಿದ ಕಾನೂನು ಕ್ರಮ ಜರುಗಿಸಲು ಪೊಲೀಸರು ಪೂರ್ಣ ಸ್ವಾತಂತ್ರ ಹೊಂದಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಜನ ಶಾಂತಿಯಿಂದ ಸಹಕರಿಸಬೇಕು ಎಂದು ಮನವಿ ಕೂಡ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿ,ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮತೆಗೆದುಕೊಳ್ಳುವಂತೆನೂ ಸೂಚಿಸಿದ್ದಾರೆ.

Edited By :
PublicNext

PublicNext

29/07/2022 07:53 am

Cinque Terre

47.32 K

Cinque Terre

3