ವರದಿ : ರವಿ ಕುಮಾರ್ ಕೋಲಾರ.
ಕೋಲಾರ: ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸ್ಪೀಕರ್ ಕೆ.ಅರ್ ರಮೇಶ್ ಕುಮಾರ್ ಹಾಗೂ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಬಣಗಳ ನಡುವೆ ಮತ್ತೆ ಕಿತ್ತಾಟವಾಗಿದೆ.ದಾವಣಗೆರೆ ಜಿಲ್ಲೆಯಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರವರ 75 ನೇ ಅಮೃತ ಮಹೋತ್ಸವ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಬ್ಯಾನರ್ ನಲ್ಲಿ ಕೆ.ಎಚ್ ಮುನಿಯಪ್ಪ ಫೋಟೋ ಇಲ್ಲದಿದಕ್ಕೆ ಮಾತಿಗೆ ಮಾತು ಬೆಳೆದು ಎರಡು ಬಣದವರೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ರು.ನೆರದಿದ್ದ ಕಾರ್ಯಕರ್ತರಿಗೆ ಪುಕ್ಕಟೆ ಮನರಂಜನೆ ನೀಡಿದ್ರು.ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್,ಶಾಸಕರಾದ ನಂಜೇಗೌಡ, ಅನಿಲ್ ಕುಮಾರ್, ನಜೀರ್ ಅಹಮದ್ ಭಾಗಿಯಾಗಿದ್ರು.
PublicNext
29/07/2022 01:51 pm