ಕೋಲಾರ: ಕೋಲಾರ ಜಿಲ್ಲೆಯಲ್ಲಿ ಇಬ್ಬರು ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಲ್ಲೆ ನಡೆಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆಯುತ್ತಿದ್ದ ಎರಡು ಬಣದವರ ಗಲಾಟೆಯ ದೃಶ್ಯ ಸೆರೆ ಹಿಡಿಯುತ್ತಿದ್ದ ಪತ್ರಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬದ ಪೂರ್ವಭಾವಿ ಸಭೆಯಲ್ಲಿ ರಮೇಶ್ ಕುಮಾರ್ ಹಾಗೂ ಕೆ.ಎಚ್ ಮುನಿಯಪ್ಪ ಬಣದ ಕಾರ್ಯಕರ್ತರ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದರು.
ಬ್ಯಾನರ್‌ನಲ್ಲಿ ಮುನಿಯಪ್ಪ ಫೋಟೋ ಇಲ್ಲದಿದ್ದಕ್ಕೆ ಗಲಾಟೆ ಆರಂಭವಾಗಿದ್ದು, ಗಲಾಟೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆ ಮಾಡುತ್ತಿದಕ್ಕೆ ರಮೇಶ್ ಕುಮಾರ್‌ಗೆ ಕೋಪಗೊಂಡು ಚೇರಿನಿಂದ ಮೇಲಕ್ಕೆ ಎದ್ದು ಪತ್ರಕರ್ತರ ಹಲ್ಲೆ ಮಾಡಿದ್ದಾರೆ. ಬಳಿಕ ಸಭೆಯಿಂದ ಹೊರ ನಡೆದರು. ಇನ್ನು ರಮೇಶ್ ಕುಮಾರ್ ನಡೆಯ ವಿರುದ್ಧ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ ಹೊರಹಾಕಿದ್ದಾರೆ.
ವರದಿ: ರವಿ ಕುಮಾರ್, ಕೋಲಾರ.
PublicNext
29/07/2022 05:43 pm