ಪಾವಗಡ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಪಾವಗಡ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಬಜರಂಗದಳದ ಜಿಲ್ಲಾ ಸಹ ಸಂಯೋಜಕ ಸುಮನ್ ಮಾತನಾಡಿ, ಪ್ರವೀಣರ ಹತ್ಯೆ ಖಂಡನೀಯ. ಸರ್ಕಾರ ಪ್ರತಿಬಾರಿ ಹಿಂದೂ ಕಾರ್ಯಕರ್ತರ ಕೊಲೆಯಾದಾಗ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳುತ್ತದೆ. ಆದರೆ ಇದು ಕೇವಲ ಮಾತಿಗಷ್ಟೇ ಸೀಮಿತವಾಗಿದ್ದು ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಕಟುವಾಗಿ ಟೀಕಿಸಿದರು.
ಪಾವಗಡ ಪಟ್ಟಣದ ಶನೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಗೆ ಮನವಿ ನೀಡಿದರು.
ಪ್ರತಿಭಟನೆಯಲ್ಲಿ ರಾಮಸೇನೆಯ ಅಧ್ಯಕ್ಷ ಕಾವಲ ಗೆರೆ ರಾಮಾಂಜಿ , ಬಜರಂಗದಳ ತಾಲೂಕು ಸಂಚಾಲಕ ಮಂಜುನಾಥ್, ಸಂಚಾಲಕರಾದ ನಾಗೇಶ್, ಹರೀಶ್, ರವಿ, ಸೇರಿದಂತೆ ಇತರರು ಇದ್ದರು.
PublicNext
30/07/2022 09:20 am