ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ 'ರಾಷ್ಟ್ರಪತ್ನಿ' ಎಂದು ಕರೆದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದೇ ವಿಚಾರವಾಗಿ ಮಾತನಾಡಿರುವ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್, ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ಮುರ್ಮು ಅವರ ಪಾದ ಮುಟ್ಟಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದಲ್ಲದೆ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು. ಆಶ್ಚರ್ಯಕರ ಸಂಗತಿಯೆಂದರೆ, ಸೋನಿಯಾ ಗಾಂಧಿ ಮಹಿಳೆಯಾಗಿದ್ದರೂ ಅವರು ಚೌಧುರಿ ಅವರನ್ನು ರಕ್ಷಿಸುತ್ತಿದ್ದಾರೆ" ಎಂದು ಅಸಮಾಧಾನ ಹೊರ ಹಾಕಿದರು.
PublicNext
30/07/2022 06:38 pm