ಬೆಂಗಳೂರು: ಕಾಂಗ್ರೆಸ್ ಪಕ್ಷದ ಮೇಲ್ಮನೆ ಸದಸ್ಯ ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕಾಗಿ ಆಗಸ್ಟ್ 11ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.
ಪರಿಷತ್‌ಗೆ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಇಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಕಟಿಸಿದ್ದಾರೆ.
ನಾಮಪತ್ರಗಳ ಪರಿಶೀಲನೆ ದಿನ ಆಗಷ್ಟ್ 2ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ ಆ. 4 ಆಗಿದೆ. ಆ. 11ರಂದು ಮತದಾನ ನಡೆಯಲಿದೆ. ಅದೇ ದಿನ ಸಂಜೆ ಸಂಜೆ 5 ಗಂಟೆಗೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.
PublicNext
30/07/2022 07:23 pm