ಬೆಂಗಳೂರು: ದೇಶದೆಲ್ಲೆಡೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಇದರ ಬೆನ್ನಲ್ಲಿಯೇ ತಿರಂಗ ಧ್ವಜದ ಮಾರಾಟವೂ ಈಗ ಆರಂಭಗೊಂಡಿದೆ.
ಕೇಂದ್ರ ಸರ್ಕಾರ ಈಗಾಗಲೇ ಹರ್ ಘರ್ ತಿರಂಗಾ ಅಂತ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿಯೇ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಎದುರು ರಾಷ್ಟ್ರ ಧ್ವಜ ಮಾರಾಟ ಮಾಡಲು ನಿರ್ಧರಿಸಲಾಗಿದೆ.
ತ್ರಿವರ್ಣ ಧ್ವಜ ಮಾರಾಟದ ಸ್ಟಾಲ್ ಅನ್ನ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟನೆ ಮಾಡಿದ್ದಾರೆ. ಇಲ್ಲಿ ದೊರೆಯೋ ಧ್ವಜಕ್ಕೆ 25 ರೂಪಾಯಿ ನಿಗದಿ ಪಡಿಸಲಾಗಿದೆ.
PublicNext
01/08/2022 12:50 pm