ನವದೆಹಲಿ: ಇ.ಡಿ ವಿಚಾರಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ವಿಚಾರವಾಗಿ ಸಿಎಂ ಮಮತಾ ಬ್ಯಾನರ್ಜಿ ಅವರು ಅನಗತ್ಯ ಹಸ್ತಕ್ಷೇಪ ಮಾಡ್ತಿದ್ದಾರೆ. ಮಮತಾ ಬ್ಯಾನರ್ಜಿಯ ಈ ನಡೆ ಖಂಡಿಸಿ ಬಂಗಾಳದ ಬಿಜೆಪಿ ಸಂಸದರು ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಶಿಕ್ಷಕರ ನೇಮಕಾತಿಯಲ್ಲಿ ಸಚಿವ ಪಾರ್ಥ ಚಟರ್ಜಿ ಅವರು ಅಕ್ರಮ ಎಸಗಿದ್ದಾರೆ. ಹಾಗೂ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಾರ್ಥ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ನಡುವೆ ಇ.ಡಿ ಅಧಿಕಾರಿಗಳು ನಡೆಸುತ್ತಿರುವ ವಿಚಾರಣೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ. ಹಾಗೂ ವಿಚಾರಣಾ ಪ್ರಕ್ರಿಯೆ ತೊಂದರೆ ನೀಡುತ್ತಿದ್ದಾರೆ ಎನ್ನುವುದು ಬಂಗಾಳದ ಬಿಜೆಪಿ ಸಂಸದರ ಆರೋಪವಾಗಿದೆ.
PublicNext
01/08/2022 03:03 pm