ವರದಿ- ಈರನಗೌಡ ಪಾಟೀಲ
ಹಾವೇರಿ:ನಮ್ಮ ಕಾಂಗ್ರೆಸ್ ನ 500 ಜನರ ತಂಡ ಆಂತರಿಕ ಸಮೀಕ್ಷೆ ಮಾಡಿದ್ದಾರೆ. ಆಂತರಿಕ ಸಮೀಕ್ಷೆ ಪ್ರಕಾರ 130 ಸೀಟು ಕಾಂಗ್ರೆಸ್ ಗೆಲ್ಲುತ್ತದೆ. 150 ಸೀಟ್ ಗೆಲ್ಲುವ ಗುರಿ ರಾಹುಲ್ ಗಾಂಧಿ ಕೊಟ್ಟಿದ್ದಾರೆ ಎಂದು ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಇಂದು ಸುದ್ದಿಗೋಷ್ಟಿಯಲ್ಲಿ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದು ಜನ ಬಯಸುತ್ತಿದ್ದಾರೆ. ಈ ಸರ್ಕಾರದ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸೇರಿ ಎಲ್ಲಾ ವಿಚಾರದಲ್ಲೂ ಜನ ಬೇಸತ್ತಿದ್ದಾರೆ ಎಂದು ಸಲೀಂ ಅಹ್ಮದ್ ತಿಳಿಸಿದರು.
ಪುತ್ತೂರು ಹಾಗೂ ಸುರತ್ಕಲ್ ಘಟನೆಗಳಿಂದ ಜನ ದಿಗ್ಭ್ರಾಂತರಾಗಿದ್ದಾರೆ. ಈ ರಾಜ್ಯದಲ್ಲಿ ಸರ್ಕಾರ ಜೀವಂತ ಇದೆಯಾ?
ಎಲ್ಲಾ ಘಟನೆಗಳಿಗೆ ನೇರ ಹೊಣೆ ರಾಜ್ಯ ಸರ್ಕಾರ. ಇವರ ಇಂಟಲಿಜೆನ್ಸ್ ಸಂಪೂರ್ಣ ವಿಫಲವಾಗಿದೆ. ಪುತ್ತೂರು ಹಾಗೂ ಸುರತ್ಕಲ್ ನಲ್ಲಿ ಒಟ್ಟು ಎರಡು ಕೊಲೆಯಾಗಿದೆ. ಮಸೂದ್, ಪ್ರವೀಣ್ ,ಮಹಮದ್ ಫಾಝಿಲ್ ಕೊಲೆಗಳಾಗಿವೆ. ಮುಖ್ಯಮಂತ್ರಿಗಳೇ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಎಲ್ಲಾ ಜನರಿಗೆ ಸಹಕಾರ, ರಕ್ಷಣೆ ಕೊಡ್ತೀನಿ ಅಂತ ಹೇಳಿದ್ದಿರಿ.
ಒಬ್ರ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡ್ತೀರಾ. ಆದರೆ ಉಳಿದ ಇಬ್ಬರು ಹತ್ಯೆಯಾದ ಯುವಕರ ಮನೆಗಳಿಗೆ ಹೋಗಿಲ್ಲ. ಪರಿಹಾರ ಕೊಟ್ಟಿಲ್ಲ. ತಮ್ಮ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ಎನ್ಐಎ ಗೆ ಕೊಡ್ತೀರಿ. ನಮ್ಮ ಪೊಲೀಸರಿಗೆ ಈ ಪ್ರಕರಣ ಬೇಧಿಸೋ ಶಕ್ತಿ ಇಲ್ಲವಾ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.
PublicNext
01/08/2022 09:00 pm