ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೇಡ ಜಂಗಮರಿಗೆ ಎಸ್‌.ಸಿ ಪ್ರಮಾಣ ಪತ್ರ ಕೊಡಬೇಡಿ: ಎಂ.ಪಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಗುರು ಸ್ಥಾನದಲ್ಲಿರುವ ಬೇಡ ಜಂಗಮರು ಪರಿಶಿಷ್ಟ ಜಾತಿಗೆ ಸೇರಿದವರಲ್ಲ. ಅವರಿಗೆ ಎಸ್.ಸಿ ಸರ್ಟಿಫಿಕೇಟ್ ಅನ್ನು ರಾಜ್ಯ ಸರ್ಕಾರ ನೀಡಬಾರದು ಎಂದು ಅನುಸೂಚಿತ ಜಾತಿ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ. ಎಂ.ಪಿ.ಕುಮಾರಸ್ವಾಮಿ ಎಂದು ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಎಸ್.ಸಿ ಎಸ್.ಟಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವುದು, ಸಮಾಜಿಕವಾಗಿ ಮೇಲುಸ್ತರದಲ್ಲಿರುವ ಮೇಲ್ವರ್ಗಗಳು ನಮ್ಮನ್ನು ಎಸ್.ಸಿ.ಎಸ್.ಟಿಗೆ ಸೇರಿಸಿ ಎಂದು ಒತ್ತಡ ಹಾಕುವುದು ಪ್ರಬಲರು ದುರ್ಬಲರ ಮೇಲೆ ನಡೆಸುವ ದೌರ್ಜನ್ಯವಷ್ಟೆ ಅಲ್ಲ . ಎಸ್.ಸಿ, ಎಸ್.ಟಿ ಸಮುದಾಯಗಳ ಮೇಲೆ ಎಸಗುವ ಹೊಸ ಮಾದರಿಯ ರೂಪಾಂತರಿ ಅಟ್ರಾಸಿಟಿ ಪ್ರಕರಣವಾಗಿದೆ ಎಂದು ವ್ಯಾಖ್ಯಾನ ಮಾಡಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯ ಅನಾದಿಕಾಲದಿಂದಲೂ ಸಮಾಜಕ್ಕೆ ನ್ಯಾಯ ನೀತಿ ಧರ್ಮ ಬೋದಿಸುವುದರ ಜತೆಗೆ ದೀನದಲಿತರ ಮತ್ತು ಬಡವರ ಮಕ್ಕಳಿಗೆ ಉಚಿತ ಅನ್ನ ದಾಸೋಹ ಮತ್ತು ವಿದ್ಯಾಧಾನ ಮಾಡುತ್ತಿರುವ ಸಮುದಾಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಸಮುದಾಯದಲ್ಲಿ ಮೇಲಿನ ಗುರು ಸ್ಥಾನದಲ್ಲಿರುವ ಜಂಗಮರು ಎನ್ನುವ ಉಪ ಜಾತಿಯ ಕೆಲವು ವ್ಯಕ್ತಿಗಳು ಎಸ್.ಸಿ ಬೇಡ ಜಂಗಮ ಎಂಬ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಆ ಜನರ ಅನ್ನ ಕಸಿದುಕೊಳ್ಳುತ್ತಿರುವು ಮಹಾಪಾಪವಾಗಿದೆ ಎಂದು ಎಂ. ಪಿ ಕುಮಾರಸ್ವಾಮಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

02/08/2022 08:08 am

Cinque Terre

39.89 K

Cinque Terre

8

ಸಂಬಂಧಿತ ಸುದ್ದಿ