ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಗಸ್ಟ್ 3, 4ರಂದು ರಾಜ್ಯಕ್ಕೆ ಅಮಿತ್ ಶಾ: ರಾಜಕೀಯ ಚಟುವಟಿಕೆ ಚುರುಕು

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಅಮಿತ್ ಶಾ ಅವರು ಆಗಸ್ಟ್ 3 ಹಾಗೂ 4ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಗಲಾಟೆ ಮಧ್ಯೆ ಅಮಿತ್ ಶಾ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಿರುಪಯುಕ್ತ ಸಿಎಂ, ಕೈಲಾಗದ ಗೃಹ ಸಚಿವ ಎಂದು ಬಿಜೆಪಿ ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರಿಂದ ಬಿಜೆಪಿ ಸರ್ಕಾರದ ಕಾರ್ಯವೈಖರಿಗೆ ಸ್ವಪಕ್ಷದ ನಾಯಕರು ಹಾಗೂ ಹಿಂದೂ ಸಂಘಟನೆ ಮುಖಂಡರುಗಳು ಆಕ್ರೋಶಗೊಂಡಿದ್ದಾರೆ. ಇದರಿಂದ ಬಿಜೆಪಿಗೆ ಮುಖಭಂಗವಾಗಿದೆ. ಅಲ್ಲದೇ ಇದು ಮುಂದಿನ ಚುನಾವಣೆ ಮೇಲೆ ಭಾರೀ ಹೊಡೆತ ಬೀಳುವ ಸಾಧ್ಯತೆಗಳಿವೆ. ರಾಜ್ಯಕ್ಕೆ ಬರಲಿರುವ ಅಮಿತ್ ಶಾ, ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಇದೆ.

Edited By : Nagaraj Tulugeri
PublicNext

PublicNext

02/08/2022 03:30 pm

Cinque Terre

22.91 K

Cinque Terre

3

ಸಂಬಂಧಿತ ಸುದ್ದಿ