ವರದಿ: ಅರಕೇಶ್.ಎಸ್. ರಾಮನಗರ
ರಾಮನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಸರಣಿ ಕೊಲೆಗಳು, ಅಪರಾಧಗಳಿಂದ ಇಡೀ ರಾಜ್ಯ ತತ್ತರಿಸಿದ್ದು, ಜನರು ಭಯದಲ್ಲಿ ಬದುಕುತ್ತಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ರಾಜ್ಯ ಸರಕಾರ ಕೂಡಲೇ ವಿಧಾನಮಂಡಲ ಅಧಿವೇಶನ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ಬಿಡದಿಯ ತಮ್ಮ ತೋಟದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಂತಿ ಭದ್ರತೆಗಳ ವ್ಯವಸ್ಥೆ ಹದಗೆಟ್ಟಿರುವುದು ಒಂದೆಡೆಯಾದರೆ, ಮಳೆ-ಪ್ರವಾಹದಿಂದ ಜನರ ಪರಿಸ್ಥಿತಿ ಭೀಕರವಾಗಿದೆ. ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿ ತಕ್ಷಣ ಜನರ ನೆರವಿಗೆ ಧಾವಿಸಬೇಕಿದೆ ಎಂದರು.
PublicNext
02/08/2022 07:57 pm