ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಹುಲ್ ಗಾಂಧಿ ನಿರಾಕರಿಸಿದರೆ ಈ ಹಿರಿಯ ಲೀಡರ್ ಮುಂದಿನ 'ಕಾಂಗ್ರೆಸ್‌​ ಅಧ್ಯಕ್ಷ'!

ನವದೆಹಲಿ: ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ಪ್ರಮುಖ ಸುದ್ದಿಯೊಂದು ಸದ್ದು ಮಾಡುತ್ತಿದೆ. ಈ ಪ್ರಕಾರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೆ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಇನ್ನೂ ಹಿಂದೇಟು ಹಾಕುತ್ತಿದ್ದಾರಂತೆ. ಈ ಹಿನ್ನಲೆಯಲ್ಲಿ ಅಂತಿಮವಾಗಿ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ನಿರಾಕರಿಸಿದರೆ, ಪಕ್ಷವು ರಾಜಸ್ಥಾನ ಮುಖ್ಯಮಂತ್ರಿ ಮತ್ತು ಗಾಂಧಿ ಕುಟುಂಬದ ಟ್ರಸ್ಟಿ ಅಶೋಕ್ ಗೆಹ್ಲೋಟ್ ಅವರಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಬಹುದು ಎನ್ನಲಾಗಿದೆ.

ಈ ಕಾರಣಕ್ಕೆ ಅಶೋಕ್ ಗೆಹ್ಲೋಟ್ ಅವರ ಹೆಸರನ್ನೂ ಪಕ್ಷ ಪರಿಗಣಿಸುತ್ತಿದೆ. ಆದರೆ ಅಶೋಕ್ ಗೆಹ್ಲೋಟ್ ರಾಜಸ್ಥಾನದ ಸಿಎಂ ಹುದ್ದೆ ತೊರೆಯಲು ಬಯಸುವುದಿಲ್ಲ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಮನವೊಲಿಸಲು ಪ್ರಯತ್ನ ನಡೆಸಲಾಗುವುದು. ಒಂದು ವೇಳೆ ಅಂತಿಮವಾಗಿ ರಾಹುಲ್ ಗಾಂಧಿ ನಿರಾಕರಿಸಿದರೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನವನ್ನು ತೊರೆದಾಗ, ಅವರು ಪಕ್ಷಕ್ಕೆ ಗಾಂಧಿಯೇತರ ಅಧ್ಯಕ್ಷರ ಪರವಾಗಿ ವಕಾಲತ್ತು ವಹಿಸಿದ್ದರು. ಇದಕ್ಕೆ ಈಗಲೂ ಅವರು ಬದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Edited By : Vijay Kumar
PublicNext

PublicNext

03/08/2022 02:06 pm

Cinque Terre

41.51 K

Cinque Terre

2

ಸಂಬಂಧಿತ ಸುದ್ದಿ