ದಾವಣಗೆರೆ: ಸಿದ್ದರಾಮಯ್ಯ ಕೇವಲ ಹಿಂದುಳಿದ ವರ್ಗಗಳ ನಾಯಕ ಅಷ್ಟೇ ಅಲ್ಲ ಅವರು ಸರ್ವ ಜನಾಂಗಗಳ, ಸರ್ವ ಧರ್ಮಗಳ ನಾಯಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಡಿ ಹೊಗಳಿದ್ದಾರೆ.ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಅಮೃತ ಮಹೋತ್ಸವದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿದರು.
ಬಸವಣ್ಣನವರ ಜನ್ಮದಿನದಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯನವರು ಜನಸಾಮಾನ್ಯರ ಅಭಿವೃದ್ಧಿಗಾಗಿ ಶ್ರಮಿಸಿದ್ದರು ಎಂದು ಹೇಳಿದರು.
ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ನಾವುಗಳು ಮುಂದುವರಿಯೋಣ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸೋಣ ಎಂದು ಹೇಳಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಆಗಮಿಸಿದವರಲ್ಲಿ ಮನವಿ ಮಾಡಿದರು.
PublicNext
03/08/2022 04:32 pm