ಬೆಂಗಳೂರು: ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಠಕ್ಕೆ ಬಿದ್ದು ವ್ಯಕ್ತಿಪೂಜೆ ಮಾಡಿಸಿಕೊಂಡಿದ್ದಾರೆ. ಇದಕ್ಕಾಗಿ ಅಭಿನಂದನೆಗಳು ಎಂದು ರಾಜ್ಯ ಬಿಜೆಪಿ ಟ್ವೀಟ್‌ನಲ್ಲಿ ವ್ಯಂಗ್ಯವಾಡಿದೆ.
ಗಾಂಧಿ ಕುಟುಂಬದ ಹೊರತಾಗಿ ಇತರ ವ್ಯಕ್ತಿಯ ವೈಭವೀಕರಣವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ. ದೇವರಾಜು ಅರಸು, ಬಂಗಾರಪ್ಪ ಅವರ ರಾಜಕೀಯ ಜೀವನದ ಅಂತ್ಯ ಹೇಗಾಯಿತು? ಎಂಬುದನ್ನು ರಾಜ್ಯದ ಜನ ಇನ್ನೂ ಮರೆತಿಲ್ಲ. ಇದು ಎಚ್ಚರಿಕೆಯ ಕರೆ ಗಂಟೆ ಎಂದು ಬಿಜೆಪಿ ಅಭಿಪ್ರಾಯ ಪಟ್ಟಿದೆ.
ರಾಜ್ಯದಲ್ಲಿ ಮೂವರು ಹತ್ಯೆಯಾಗಿದ್ದಾರೆ. ಕಳೆದೆರಡು ದಿನಗಳಲ್ಲಿ 11ಸಾವುಗಳು ಸಂಭವಿಸಿವೆ. ಸಿದ್ದರಾಮೋತ್ಸವಕ್ಕೆ ಬರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಅಪಘಾತದಲ್ಲಿ ಮರಣ ಹೊಂದಿದ್ದಾನೆ. ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ? ಎಂದು ಪ್ರಶ್ನಿಸಿರುವ ರಾಜ್ಯ ಬಿಜೆಪಿ 'ಜನವಿರೋಧಿಕಾಂಗ್ರೆಸ್' ಎಂದು ಹ್ಯಾಷ್ ಟ್ಯಾಗ್ ಮಾಡಿದೆ.
PublicNext
03/08/2022 05:24 pm