ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ:ಬಸವಣ್ಣನವರ ಆದರ್ಶಕ್ಕೆ ವಿರುದ್ಧ ಕರ್ನಾಟಕದಲ್ಲಿ ಬಿಜೆಪಿ ಆಡಳಿತ-ರಾಹುಲ್ ಗಾಂಧಿ

ದಾವಣಗೆರೆ: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ. ಬಸವಣ್ಣನವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಿ ಕರ್ನಾಟಕದಲ್ಲಿ ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಸರ್ಕಾರದ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ.

ಎಲ್ಲರೂ ಪ್ರಾಮಾಣಿಕರಾಗಿರಬೇಕು, ಕಾಯಕವೇ ಕೈಲಾಸ ಎಂಬ ಬಸವಣ್ಣನವರು ಹೇಳಿದ್ದಾರೆ. ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿ ಸರ್ಕಾರ ನಡೆಯುತ್ತಿದೆ. ಸಮಾಜದಲ್ಲಿ ಕೋಮುಸಾಮರಸ್ಯ, ಜಾತಿ ಜಾತಿಗಳ ನಡುವೆ ಸಂಘರ್ಷ ಹುಟ್ಟು ಹಾಕಿ ಸಮಾಜದ ಸ್ವಾಸ್ಥ್ಯ ಹಾಳುಗೆಡವಿರುವ ಆರ್.ಎಸ್.ಎಸ್ ಹಾಗೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಇದಾಗಬೇಕು ಎಂದರೆ ಮತ್ತೆ 2023 ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಹೇಳಿದರು.

ದಾವಣಗೆರೆ - ಹರಿಹರ ಮಾರ್ಗ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಶಾಮನೂರು ಶಿವಶಂಕರಪ್ಪರ ಒಡೆತನದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಿದ್ದರಾಮಯ್ಯ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಾಮಾಜಿಕ ನ್ಯಾಯ ಪರಿಕಲ್ಪನೆಯೇ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಇಲ್ಲ. ಈ ಹಿಂದೆ ಕರ್ನಾಟಕದಲ್ಲಿ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸಿತ್ತು. ಸಾಮರಸ್ಯ ಹಾಗೂ ಸಮಾಜದ ಸ್ವಾಸ್ಥ್ಯ ಕದಡುವ ರೀತಿಯಲ್ಲಿ ಕೆಲಸ ಮಾಡುತ್ತಿರುವ ಬಿಜೆಪಿಯಿಂದ ಜನರು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯರ ನಾಯಕತ್ವದಲ್ಲಿ ಜನರನ್ನು ತಲುಪುವ ಪ್ರಯತ್ನ ಮಾಡುತ್ತೇವೆ. ಬಿಜೆಪಿ ಹಾಗೂ ಆರ್.ಎಸ್.ಎಸ್ ಸೋಲಿಸುವ ಶಕ್ತಿ ಕಾಂಗ್ರೆಸ್ ಗೆ ಇದೆ. ಇಲ್ಲಿ ಅದು ಸಾಧ್ಯವಾಗುತ್ತದೆ ಎಂಬ ವಿಶ್ವಾಸ ಇದೆ. ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

Edited By :
PublicNext

PublicNext

03/08/2022 07:44 pm

Cinque Terre

49.13 K

Cinque Terre

0

ಸಂಬಂಧಿತ ಸುದ್ದಿ