ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ವೈಮನಸ್ಸಿನಲ್ಲಿ, ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಒಟ್ಟಾಗಿದ್ದೇವೆ. ಬಿಜೆಪಿ ಪಕ್ಷದವರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಹಾಗೂ ನಾನು ಒಟ್ಟಾಗಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಯಾವುದೇ ಸಮಸ್ಯೆ ನಮ್ಮಲ್ಲಿ ಇಲ್ಲ. ಕಾರ್ಯಕರ್ತರು ವಿನಾಕಾರಣ ಗೊಂದಲಕ್ಕೆ ಒಳಗಾಗುವುದು ಬೇಡ ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ರಾಜ್ಯದ ಜನರು ಕೆಟ್ಟ ಆಡಳಿತದಿಂದ ರೋಸಿ ಹೋಗಿದ್ದಾರೆ. ಬಿಜೆಪಿ ಕಿತ್ತೊಗೆದು ಮತ್ತೆ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಘೋಷಿಸಿದರು.
PublicNext
03/08/2022 08:15 pm