ಬೆಂಗಳೂರು: ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಈ ನಡುವೆ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನೇರವಾಗಿ ಸಿದ್ಧತೆಯನ್ನು ಶುರು ಮಾಡಿದೆ.
ಸರಿ ಸುಮಾರು 6 ಲಕ್ಷಕ್ಕೂ ಅಧಿಕ ಮಂದಿ ಇಂದಿನ ಸಮಾವೇಶದಲ್ಲಿ ಭಾಗವಹಿಸಿದ್ದರು ಅಂತ ಅಂದಾಜಿಸಲಾಗಿದ್ದು, ಸಮಾವೇಶದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯೇ ಜನ ಸಾಗರವನ್ನು ಕಂಡು ಅಚ್ಚರಿಗೊಂಡಿದ್ದರು ಎನ್ನಲಾಗಿದೆ. ಇವೆಲ್ಲದರ ನಡುವೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಹುಬ್ಬಳ್ಳಿಯಲ್ಲಿ ಇಲ್ಲವೇ ಮೈಸೂರು ವಲಯದಲ್ಲಿ ಬಿಜೆಪಿ ನಾಯಕರು ಕೆಲ ದಿನಗಳ ಹಿಂದೆ ನಡೆಯಬೇಕಾಗಿದ್ದ ಬಿಜೆಪಿ ಸಾಧನಾ ಸಮಾವೇಶವನ್ನು ಅತಿ ಜರೂರಾಗಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಹಾಗೂ ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ದತೆ ನಡೆಸಲು ಮುಂದಾಗಿದೆ ಎನ್ನಲಾಗಿದೆ.
PublicNext
03/08/2022 10:05 pm